
ಹೊಸದಿಲ್ಲಿ: ಭಾರತ ಹಾಗೂ ಚೀನಾ ನಡುವಿನ ಗಡಿ ವಿವಾದಕ್ಕೆ ಭಾರತವೇ ನೇರ ಕಾರಣವಾಗಿದ್ದು, ಲಡಾಕ್ನಲ್ಲಿ ಉಂಟಾಗಿರುವ ಸಮಸ್ಯೆ ಹೊಣೆಯನ್ನು ಭಾರತವೇ ಹೊತ್ತುಕೊಳ್ಳಬೇಕು. ನಮಗೆ ಸೇರಿದ ಒಂದು ಇಂಚು ಭೂಮಿಯನ್ನು ನಾವು ಕಳೆದುಕೊಳ್ಳುವುದಿಲ್ಲ ಎಂದು ಚೀನಾ ಹೇಳಿದೆ.
ನಿನ್ನೆಯಷ್ಟೇ ಮಾಸ್ಕೋದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾದ ರಕ್ಷಣಾ ಸಚಿವ ವೀ ಫೆಂಗಿ ಮಹತ್ವದ ಮಾತುಕತೆ ನಡೆಸಿದ್ದರು. ಆದರೆ ಇದರ ಬೆನ್ನಲ್ಲೇ ಈ ಹೇಳಿಕೆ ನೀಡಿರುವ ಚೀನಾ, ಮತ್ತೊಮ್ಮೆ ಕ್ಯಾತೆ ತೆಗೆದಿದೆ.
ಚೀನಾ-ಭಾರತ ಗಡಿಯಲ್ಲಿ ಉದ್ವಿಗ್ನತೆಗೆ ಕಾರಣಗಳು ಸ್ಪಷ್ಟವಾಗಿದೆ. ಇದರ ಸಂಪೂರ್ಣ ಜವಾಬ್ದಾರಿ ಭಾರತದ ಮೇಲಿದೆ. ಚೀನಾ ತನ್ನ ಭೂಪ್ರದೇಶದ ಒಂದಿಂಚನ್ನು ಕಳೆದುಕೊಳ್ಳಲು ಸಿದ್ಧವಾಗಿಲ್ಲ. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡುವಲ್ಲಿ ನಮ್ಮ ಸೇನೆ ಸಮರ್ಧವಾಗಿದೆ ಎಂದು ಚೀನಾ ಹೇಳಿಕೆ ಬಿಡುಗಡೆ ಮಾಡಿದೆ ಎನ್ನಲಾಗಿದೆ.