ತಾಯಿ ಚಾಮುಂಡೇಶ್ವರಿ, ನಂಜುಂಡೇಶ್ವರ ದೇಗುಲ ಪ್ರವೇಶಕ್ಕೆ ನಿಯಮ ಸಡಿಲಿಕೆ

ಮೈಸೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಯಮ ಸಡಿಲಿಕೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರು ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಶನಿವಾರ ದಿನದಂದೂ ತಾಯಿ ಚಾಮುಂಡೇಶ್ವರಿ ದೇವಾಲಯಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಪ್ರವೇಶ ನಿರ್ಬಂಧ ಮುಂದುವರಿಯಲಿದೆ.

ಚಾಮುಂಡೇಶ್ವರಿ ದರ್ಶನ ಸಮಯ:

ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 6 ಗಂಟೆ, ರಾತ್ರಿ 7.30ರಿಂದ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಶುಕ್ರವಾರ ಹಾಗೂ ಶನಿವಾರಗಳಲ್ಲಿ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ ಮಧ್ಯಾಹ್ನ 3.30ರಿಂದ 6 ಗಂಟೆವರೆಗೆ ಮಾತ್ರ ಪ್ರವೇಶ. ಶುಕ್ರವಾರ ಶನಿವಾರ ರಾತ್ರಿ ದರ್ಶನಕ್ಕೆ‌ ನಿರ್ಬಂಧ ವಿಧಿಸಲಾಗಿದೆ.

ನಂಜನಗೂಡು ಶ್ರೀಕಂಠೇಶ್ವರ ದರ್ಶನ ಸಮಯ:

ಇನ್ನು ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ 6 ಗಂಟೆಯಿಂದ 1 ಗಂಟೆ ಸಂಜೆ 4 ಗಂಟೆಯಿಂದ ರಾತ್ರಿ 8.30ರವೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಬಿ ಶರತ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *