ಪ್ರವಾಹ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ


ಮೈಸೂರು,ಜುಲೈ 24:- ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಜುಲೈ 22 ರಂದು ಕಬಿನಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 18,000 ಕ್ಯೂಸೆಕ್‍ಗಿಂತ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ 30000 ಕ್ಯೂಸೆಕ್ ನೀರನ್ನು ಕಬಿನಿ ನದಿಗೆ ಹರಿಸಲಾಗುವುದು.


  ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಜಲಾಶಯದ ಕಾರ್ಯಪಾಲನ ಅಭಿಯಂತರರಾದ ಸಿ.ವಿ.ಸುರೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *