ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ನಂಟು ಸಂಬಂಧದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರು ಬಿಜೆಪಿಯ ಸದಸ್ಯೆ ಅಲ್ಲ. ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಆಕೆಗೆ ಯಾವುದೇ ಜವಾಬ್ದಾರಿ ನೀಡಿರಲಿಲ್ಲ ಎಂದು ಬಿಜೆಪಿ ರಾಜ್ಯ ಘಟಕವು ಸ್ಪಷ್ಟಪಡಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಚುನಾವಣೆ ಪ್ರಚಾರದಲ್ಲಿ ರಾಗಿಣಿ ಅವರು ವೈಯಕ್ತಿವಾಗಿ ಪಾಲ್ಗೊಂಡಿದ್ದರು. ಆಕೆಯ ವೈಯಕ್ತಿಕ ಹಾಗೂ ವೃತ್ತಿಪರ ಬದುಕಿನ ಚಟುವಟಿಕೆಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇದಕ್ಕೆ ಪಕ್ಷ ಜವಾಬ್ದಾರಿಯಲ್ಲ ಎಂದು ತಿಳಿಸಿದೆ.