ರಾಜ್ಯದಲ್ಲಿ  ಯುವಕರನ್ನು ನಾಚುವಂತೆ ಮಾಡಿದ್ದ ತುಮಕೂರಿನಲ್ಲಿ 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ತುಮಕೂರಿನ  ಜಿಲ್ಲೆಯ . ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು ಕಳೆದ 5 ತಿಂಗಳ ಹಿಂದೆ ಮದುವೆ ನಡೆದಿತ್ತು..

ತುಮಕೂರು: ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ( ಸುದ್ದಿ) ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ..

ಮೇಘನಾ ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದು, ಈಕೆಗೆ ಬೇರೆಯವರ ಜೊತೆ ಮೊದಲೇ ಒಂದು ಮದುವೆಯಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಪತಿ ಕಳೆದ ಎರಡು ವರ್ಷಗಳಿಂದ ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇತ್ತು. ಪತಿ ಎರಡು ವರ್ಷಗಳಿಂದ ಬಾರದ ಹಿನ್ನೆಲೆಯಲ್ಲಿ ಮೇಘನಾಳೇ ಹೋಗಿ 45 ವರ್ಷದ ವ್ಯಕ್ತಿಯನ್ನ ಮದುವೆಯಾಗಿದ್ದರು.

ಮೇಘನಾ ಸ್ವತಃ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ ಮದುವೆಯಾಗದ ಶಂಕರಣ್ಣ ಯುವತಿಯನ್ನ ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.

ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.