ಇಂದಿನಿಂದ ಅನ್ ಲಾಕ್ 3.0. ಯಾವುದಕ್ಕೆ ಅವಕಾಶ-ಯಾವುದಕ್ಕೆ ಅವಕಾಶವಿಲ್ಲ? ರಾತ್ರಿ ಕರ್ಫ್ಯೂ ಮುಂದುವರಿಕೆ

ರಾಜ್ಯಾದ್ಯಂತ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗಲಿದ್ದು, ರಾತ್ರಿ 9ಗಂಟೆಯವರೆಗೆ ಅಂಗಡಿ ಶಾಪಿಂಗ್ ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಬಿಎಸ್ ಯಡಿಯೂರಪ್ಪ, ಕೊಡಗು ಜಿಲ್ಲೆ ಹೊರತುಪಡಿಸಿ ಸೋಮವಾರದಿಂದ ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆಗೆ ನಿರ್ಧರಿಸಲಾಗಿದ್ದು, ಜುಲೈ 19ರವರೆಗೆ ಅನ್ವಯವಾಗಲಿದೆ ಎಂದರು.

ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದ್ದು, ನೈಟ್ ಕರ್ಫ್ಯೂಗಳಿಗೆ ಮಾತ್ರ ಜಾರಿಯಲ್ಲಿರುತ್ತದೆ. ರಾತ್ರಿ 9ರಿಂದ ಬೆಳಿಗ್ಗೆ 5ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಿದರು.

ಯಾವುದಕ್ಕೆ ಅವಕಾಶ-ಯಾವುದಕ್ಕೆ ಅವಕಾಶವಿಲ್ಲ?:

ಅಂಗಡಿ ತೆರೆಯಲು ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆಯವರೆಗೆ ಅವಕಾಶ
ಕೈಗಾರಿಕೆ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ
ಥೀಯೆಟರ್ ತೆರೆಯಲು ಅವಕಾಶವಿಲ್ಲ
ಮಾಲ್ ಶಾಪಿಂಗ್ ಕಾಂಪ್ಲೆಕ್ಸ್ ಗಳಿಗೆ ಅವಕಾಶ
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ 100ರಷ್ಟು ಜನರಿಗೆ ಅವಕಾಶ
ದೇವಸ್ಥಾನಗಳಲ್ಲಿ ಭಕ್ತರಿಗೆ ಅವಕಾಶವಿದೆ, ಆದರೆ ವಿಶೇಷ ಪೂಜೆಗೆ ಅವಕಾಶವಿಲ್ಲ
ಮದುವೆ ಸಮಾರಂಭಕ್ಕೂ ಶೇ.100ರಷ್ಟು ಜನರಿಗೆ ಅವಕಾಶ
ಬಸ್, ಮೆಟ್ರೋದಲ್ಲಿ ಶೇ.100ರಷ್ಟು ಪ್ರಯಾಣಿಕರಿಗೆ ಅವಕಾಶ

ಪ್ರತಿಭಟನೆ, ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ
ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆ ತೆರೆಯುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳಲಾಗುವುದು

ಸದ್ಯಕ್ಕೆ ಶಾಲಾ ಕಾಲೇಜು ತೆರೆಯಲು ಅವಕಾಶವಿಲ್ಲ. ಆನ್ ಲೈನ್ ಕ್ಲಾಸ್ ಮುಂದುವರಿಕೆ


ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ.

  1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
  4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
  5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
  6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
  9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
  11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
    • ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
    • ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿ.

Leave a Reply

Your email address will not be published. Required fields are marked *