ಪಾಂಡವಪುರ ತಾಲೂಕು ಪತ್ರಕರ್ತರ ಸಂಘದ ಖಜಾಂಚಿ ಆಂಥೋಣಿ ರಾಬರ್ಟ್ ರಾಜ್ ಹೃದಯಾಘಾತದಿಂದ ನಿಧನ

ಮಂಡ್ಯ ಜಿಲ್ಲೆಯ ಹಿರಿಯ ಪತ್ರಕರ್ತ ಮಿತ್ರ, ಪಾಂಡವಪುರ ತಾಲೂಕು ಪತ್ರಕರ್ತರ ಸಂಘದ ಖಜಾಂಚಿ ಆಂಥೋಣಿ ರಾಬರ್ಟ್ ರಾಜ್(52) ಈ ದಿನ ಸಂಜೆ 4ರ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.

ರಾಬರ್ಟ್ ರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ. ಈ ದಿನ ಬೆಳಗ್ಗೆ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ನಡೆದ ಸಭಾಂಗಣದಲ್ಲಿ ಶಾಸಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಲಘು ಹೃದಯಾಘಾತವಾಗಿತ್ತು. ನಂತರ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆ ಪ್ರಾಥಮಿಕ ಚಿಕಿತ್ಸೆ ನಂತರ ಮೈಸೂರು ಜಯದೇವ ಆಸ್ಪತ್ರೆಗೆ ರವಾನಿಸಲಾಗಿತ್ತು. ಮತ್ತೆ ಮೂರು ಬಾರಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *