ರಾಮನಗರ: ತನ್ನ ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು 2 ಕೆ.ಜಿ 800 ಗ್ರಾಂ ತೂಕದ ಗಾಂಜಾ ಗಿಡವನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೂಟಗಲ್ ಹೋಬಳಿ ಲಕ್ಷ್ಮೀಪುರ ಗ್ರಾಮದ ನಿವಾಸಿ ಅನಿಲ್ ಕುಮಾರ್ ಬಂಧಿತನಾಗಿದ್ದು, ಈತ ತನ್ನ ಮನೆಯ ಹಿಂಭಾಗದಖಾಲಿ ಜಾಗದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದನು. ಈ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ನರಸಿಂಹಮೂರ್ತಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ ಅನಿಲ್ ಕುಮಾರನನ್ನು ಬಂಧಿಸಿರುವ ಪೊಲೀಸರು ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.