ಮೈಸೂರು,: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಶುಕ್ರವಾರ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ, ಗೌರವ ಸಲ್ಲಿಸಿದರು.
ಸರಸ್ವತಿಪುರಂನಲ್ಲಿರುವ ಬಿ.ಎಸ್. ರಾಮಚಂದ್ರರಾವ್, ಸೋಮಶೇಖರಯ್ಯ, ಸಿದ್ಧಾರ್ಥನಗರದಲ್ಲಿರುವ ಬಿ.ಲಿಂಗಯ್ಯ, ಟಿ.ಪುಟ್ಟಣ್ಣ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಶಲ-ಕ್ಷೇಮ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಬರುತ್ತಿರುವ ಬಗ್ಗೆ ವಿಚಾರಿಸಿದರು. ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆಯು ಮಾಹಿತಿ ಪಡೆದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಚಾರ ತಹಶೀಲ್ದಾರ್ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.