ನವೆಂಬರ್ 14 ರಂದು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಡಾ. ಮಂಜುನಾಥಸ್ವಾಮಿ

ಮೈಸೂರು, ನವೆಂಬರ್ 12 :- ಭಾರತೀಯ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಸಂಬಂಧ ವಿಶೇಷ ಆಂದೋಲನ ಕಾರ್ಯಕ್ರಮವನ್ನು 2021ರ ನವೆಂಬರ್ 14, 21 ಹಾಗೂ 28 ರಂದು ಹಮ್ಮಿಕೊಳ್ಳಲಾಗಿದೆ.

ಯುವ ಮತದಾರರು ಅಂದು VOTERS HELP LINE APPLICATION  ಅನ್ನು ತಮ್ಮ ಮೊಬೈಲ್ನಲ್ಲಿ ಡೌನ್ಲೋಡ್ ಮಾಡಿಕೊಂಡು ಅರ್ಜಿನಮೂನೆ 6ರಲ್ಲಿ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಮತದಾರರು ಪಟ್ಟಿಯಲ್ಲಿ ಹೆಸರು ತಿದ್ದುಪಡಿಯಿದ್ದರೆ VOTERS HELP LINE APPLICATION ಮುಖಾಂತರ ಮಾಡಿಕೊಳ್ಳಬಹುದು ಅಥವಾ ತಮ್ಮ ಹತ್ತಿರದ ಮತಗಟ್ಟೆಗೆ ಭೇಟಿ ನೀಡಿ ಬಿ.ಎಲ್.ಒ ರವರಿಗೆ ಅರ್ಜಿ ನಮೂನೆ 6, 7, 8 ಮತ್ತು 8ಎ ಅನ್ನು ನೀಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಅಥವಾ ತೆಗೆದು ಹಾಕಲು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.