ಕೊಡಗಿನಲ್ಲಿ ಇಬ್ಬರು ಸಾವು

ಮಡಿಕೇರಿ: ಜಿಲ್ಲೆಯಲ್ಲಿ ಒಂದಷ್ಟು ಇಳಿಕೆ ಕಂಡಿದ್ದ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿರುವುದು ಗೋಚರಿಸುತ್ತಿದೆ. ಜೂ. 30 (ಬುಧವಾರ)  242 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದೆ.

ಕೊರೊನಾ ಸೋಂಕು 216 ಆರ್‌ಟಿಪಿಸಿಆರ್ ಮತ್ತು 26 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 97 ಹೊಸ ಕೊರೊನಾ ಪ್ರಕರಣಗಳು ಕಂಡುಬAದಿದ್ದು, ಈ ಪೈಕಿ 91 ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು 06 ಪ್ರಕರಣ ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಇನ್ನು ಸೋಮವಾರಪೇಟೆ ತಾಲೂಕಿನಲ್ಲಿ 60 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 53 ಆರ್‌ಟಿಪಿಸಿಆರ್ ಮತ್ತು 07 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವಿರಾಜಪೇಟೆ ತಾಲೂಕಿನಲ್ಲಿ 85 ಹೊಸ ಕೋವಿಡ್-19 ಪ್ರಕರಣಗಳು ಕಂಡುಬAದಿದ್ದು, ಈ ಪೈಕಿ 72 ಆರ್‌ಟಿಪಿಸಿಆರ್ ಮತ್ತು 13 ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.    

ಸದ್ಯ ಜಿಲ್ಲೆಯಲ್ಲಿ ಒಟ್ಟು 29,449 ಕೊರೊನಾ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 146 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಮೂಲಕ ಗುಣಮುಖ ಹೊಂದಿದವರ ಸಂಖ್ಯೆ 27,910ಕ್ಕೇರಿದೆ. ಜಿಲ್ಲೆಯಲ್ಲಿ 1166 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಸಾವನ್ನಪ್ಪುವುದರೊಂದಿಗೆ, ಸಾವಿನ ಸಂಖ್ಯೆ 373ಕ್ಕೇರಿದೆ. 

ಹಾಗೆಯೇ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 176 ಆಗಿದ್ದು ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.9.3 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *