ಮೈಸೂರು, :- ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಕಳೆದ ಬಾರಿಯಂತೆ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸುವರು. ಪ್ರತಿವರ್ಷದಂತೆ ಪೊಲೀಸ್ ಇಲಾಖೆಯು ಪಥಸಂಚಲನ ನಡೆಸುವರು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್. ಮಂಜುನಾಥಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ಮುಡಾ ಆಯುಕ್ತರು ಡಾ. ಡಿ.ಬಿ ನಟೇಶ್, ಡಿಸಿಪಿ ಪ್ರದೀಪ್ ಗುಂಟಿ, ಶಿವರಾಜ್, ಉಪವಿಭಾಗಾಧಿಕಾರಿ ಕಮಲಾ ಭಾಯಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.