ಬೆಂಗಳೂರು, ಜು.27-ಬೆಂಗಳೂರಿನಿಂದ ಬಂದಿರುವ ವೀಕ್ಷಕರಾದ ಧರ್ಮಂದ್ರ ಪ್ರಧಾನ್, ಅರುಣ್ ಸಿಂಗ್, ಕಿಶನ್ ರೆಡ್ಡಿ ಸಮ್ಮುಖದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಲಾಯಿತು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.
ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಯಾಯಿ ಅವರನ್ನು ಸರ್ವಸಮ್ಮತ ನಾಯಕರನ್ನಾಗಿ ಆಯ್ಕೆಮಾಡಲಾಯಿತು.
ಇದಕ್ಕೂ ಮೊದಲು ಬೆಂಗಳೂರಿನ ಸದಾಶಿವನಗರದ ಬೊಮ್ಮಾಯಿ ಮನೆಗೆ ಭೇಟಿ ನೀಡಿದ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿ ಅವರು, ತಮ್ಮನ್ನು ನೂತನ ಸಿಎಂ ಆಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ತಿಳಿಸಿ, ಅಭಿನಂದಿಸಿದರು.
ಸಿಎಂ ಪಟ್ಟಕ್ಕಾಗಿ ಮುರುಗೇಶ್ ನಿರಾಣಿ ಹಾಗೂ ಅರವಿಂದ್ ಬೆಲ್ಲದ್ ಪೈಪೋಟಿ ನಡೆಸಿದ್ದರು.ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗುವ ಅದೃಷ್ಟ ಒಲಿದು ಬಂದಿದೆ.
ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಪ್ರಬಲ ಲಿಂಗಾಯತ ಸಮುದಾಯದ ನಾಯಕರನ್ನು ಉತ್ತರ ಕರ್ನಾಟಕದ ಬಸವರಾಜ ಬೊಮ್ನಾಯಿ ಅವರನ್ನು ಆಯ್ಕೆ ಮಾಡಲಾಗಿದೆ.
ಗೃಹ, ಜಲಸಂಪನ್ಮೂಲ ದಂತಹ ಪ್ರಮುಖ ಖಾತೆಯನ್ನು ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಬಿಜೆಪಿಯಲ್ಲಿ ಹಿರಿಯ ನಾಯಕನಾಗಿ ಅನುಭವ ಹೊಂದಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ.
ಬಸವರಾಜ ಬೊಮ್ನಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಣೆಯಾಗುತ್ತಿದ್ದಂತೆ ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.