ಮೈಸೂರು: ನಗರದ ವಿಸ್ಮಯ ಬುಕ್‌ಹೌಸ್ ಮತ್ತು ಅಲ್ಲಮ ರಿಸರ್ಚ್ ಅಂಡ್ ಕಲ್ಚರಲ್ ಫೌಂಡೇಶನ್ ಸಂಯಕ್ತಾಶ್ರಯದಲ್ಲಿ ಜುಲೈ ೨೪ ರಂದು ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ ಅವರ ಲೋಕಾಂತದ ಮೊರೆತ, ನೆಲದ ನೆನಹು, ಇಂದ್ರ ಜಾಲ ಕೃತಿಗಳ ಬಿಡುಗಡೆ ಸಮಾರಂಭ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಎಂಜಿನಿಯರುಗಳ ಸಭಾಂಗಣದಲ್ಲಿ ನಡೆಯಲಿದೆ.

ಸಂಜೆ ೪.೩೦ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಾಸು ಅವರು ಅಧ್ಯಕ್ಷತೆ ವಹಿಸುವರು. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಜೆ.ಪಟೇಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮುಜಾಫರ್ ಅಸ್ಸಾದಿ ಪುಸ್ತಕ ಕುರಿತು ಮಾತನಾಡುವರು.
ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ, ಪ್ರಗತಿಪರ ಕೃಷಿಕ ಚಿನ್ನಸ್ವಾಮಿ ವಡ್ಡಗೆರೆ, ಪತ್ರಕರ್ತ ಪಿ.ಓಂಕಾರ್, ಪ್ರಕಾಶಕ ಪ್ರಕಾಶ್ ಚಿಕ್ಕಪಾಳ್ಯ ಉಪಸ್ಥಿತರಿರುವರು.
