ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ.
ಸಚಿವ ಎಸ್.ಟಿ.ಸೋಮಶೇಖರ್ ಪುತ್ರನಿಗೆ ಬ್ಲಾಕ್‌ಮೇಲ್; ಕಾರಣ ಕೇಳಿದ್ರೆ ಶಾಕ್!
ಬೆಂಗಳೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವರ ಪುತ್ರನ ಅಶ್ಲಿಲ ವಿಡಿಯೋ ತಮ್ಮ ಬಳಿಯಿದೆ. 1 ಕೋಟಿ ನೀಡದಿದ್ದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗುವುದು ಎಂದು ಆರೋಪಿಗಳು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಆರೋಪಿ ರಾಹುಲ್ ಭಟ್ ಎಂಬಾತನನ್ನು ಐದು ದಿನಗಳವರೆಗೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾಸಕನ ಪುತ್ರಿ ಭಾಗಿ:
ರಾಹುಲ್ ಭಟ್ ದುಬೈನಿಂದ ವಾಪಸ್ಸಾದ ಬಳಿಕ ಆತನನ್ನು ಬಂಧಿಸಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು, ಮತ್ತೋರ್ವ ಆರೋಪಿಯನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತರ ಕರ್ನಾಟಕ ಮೂಲದ ಲಂಡನ್ ನಲ್ಲಿ ಇರುವ ಶಾಸಕರ ಪುತ್ರಿಯೊಬ್ಬಳು ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ಈ ನಿಟ್ಟಿನಲ್ಲಿ ಸೈಬರ್ ಕ್ರೈಮ್ ಪೊಲೀಸರ ಜೊತೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.