ಹುಣಸೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಗೇಟ್ ಬಳಿ ನಡೆದಿದೆ.

ಚಲುವರಾಜು ಅವರ ಪುತ್ರ ಕೀರ್ತಿ (ಅಯ್ಯಪ್ಪ)(28 ವರ್ಷ) ಸಾವನ್ನಪ್ಪಿದ ಯುವಕ.
ಹುಣಸೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಮೈಸೂರಿನಿಂದ ಹುಣಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಸವಾರ ಕೀರ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರಿಗೆ ಗಂಭೀರ ತರದ ಗಾಯಗಳಾಗಿವೆ. ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.