ಮಡಿಕೇರಿ : ಜಿಲ್ಲೆಯಲ್ಲಿ ಸೋಮವಾರ ಕೇವಲ 19 ಹೊಸ ಕೊರೊನಾ ಪ್ರಕರಣಗಳು ದೃಢಪಡುವುದರೊಂದಿಗೆ ಎರಡು ಅಂಕಿಗೆ ಸೋಂಕು ಇಳಿದಿರುವುದು ತುಸು ನೆಮ್ಮದಿ ತಂದಿದೆ. ಆದರೆ ಒಂದು ದಿನದ ಅವಧಿಯಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ ಒಂದು ಹೊಸ ಕೋವಿಡ್ ಪ್ರಕರಣ ಕಂಡುಬಂದಿದೆ. ಇದು ರಾಫಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 15 ಹೊಸ ಕೋವಿಡ್ ಪ್ರಕರಣ ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಪತ್ತೆಯಾಗಿದೆ. ವಿರಾಜಪೇಟೆ ತಾಲೂಕಿನಲ್ಲಿ 03 ಹೊಸ ಕೋವಿಡ್ ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 30,046ಕ್ಕೇರಿದ್ದು, ಈ ಪೈಕಿ 24ಗಂಟೆಗಳ ಅವಧಿಯಲ್ಲಿ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ 28,767 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 902 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಸಾವನ್ನಪ್ಪುವುದರೊಂದಿಗೆ ಮರಣದ ಸಂಖ್ಯೆ 377ಕ್ಕೇರಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 158 ಇದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.6.12 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.