ಕೋವಿಡ್ ನೆಗೆಟಿವ್ ಇದ್ದರೆ ಮಾತ್ರ ಜಿಲ್ಲೆಗೆ ಪ್ರವೇಶ : ಸಚಿವ ಎಸ್.ಟಿ.ಸೋಮಶೇಖರ್

ಜಿಲ್ಲೆಯ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ

ಮೈಸೂರು, ಜುಲೈ. 07.:- ಕೇರಳ ಗಡಿಯಿಂದ ಜನರು ಮೈಸೂರು ಜಿಲ್ಲೆಗೆ ಬರಬೇಕೆಂದರೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತಂದರೆ ಮಾತ್ರ ಪ್ರವೇಶ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಶನಿವಾರ ಮೈಸೂರು ಜಿಲ್ಲೆಯ ಗಡಿಭಾಗ ಬಾವಲಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿ, ನಿನ್ನೆ ಚಾಮರಾಜನಗರದಲ್ಲಿ ಕೋವಿಡ್ ಸಭೆ ನಡೆಸಿ, ಅಲ್ಲಿನ ಗಡಿ ಭಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದೆನೆ ಎಂದರು.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದಾಗ ಇಲ್ಲಿನ ಸಮಸ್ಯೆಗಳನ್ನು ಮನಗಂಡು ಶೆಡ್ ನಿರ್ಮಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ ಫಲವಾಗಿ ವೈದ್ಯರಿಗಾಗಿ ಶೆಡ್ ಅನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಕೋವಿಡ್ 3ನೇ ಅಲೆ ಬರಬಹುದೆಂಬ ದೃಷ್ಟಿಯಿಂದ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲೆ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಟ್ಟೇಚ್ಚರವನ್ನು ವಹಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಟೆಸ್ಟ್ ಅನ್ನು ಕಡಿಮೆ ಮಾಡಿಲ್ಲ. ಪ್ರತಿನಿತ್ಯ 10 ಸಾವಿರ ಕೋವಿಡ್ ಟೆಸ್ಟ್ ನಡೆಯುತ್ತಿದೆ ಎಂದರು.

ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಗೆ ಸಂಬಂಧಪಟ್ಟಂತೆ ಯಾವುದೇ ಕೊರತೆ ಇಲ್ಲ. ಜಿಲ್ಲೆಯ ಗಡಿಭಾಗದ ಹಳ್ಳಿಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಶೇ.100 ರಷ್ಟು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಕೆಂಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಸಭೆ ನಡೆಸಿ ಸಾರ್ವಜನಿಕರಿಗೆ ಹಾಗೂ ವ್ಯಾಪರಿಗಳಿಗೆ ತೊಂದರೆಯಾಗದಂತೆ ಮುಂದಿನ ತೀರ್ಮಾನವನ್ನು ಕೈಗೊಂಡು ತಿಳಿಸಲಾಗುವುದು ಎಂದರು.

ಕಳೆದ ಬಾರಿ ಲಾಕ್ ಡೌನ್ ನಿಂದ ಜನಸಾಮಾನ್ಯರಿಗೆ ಹಾಗೂ ಉದ್ಯಮಕ್ಕೆ ಬಾರಿ ಹೊಡೆತ ಬಿದ್ದಿದೆ. ಈಗ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಪಾಸಿಟಿವ್ ರೆಟ್ ಕಡಿಮೆ ಇರುವುದರಿಂದ ಲಾಕ್ ಡೌನ್ ಮಾಡುವ ಚಿಂತನೆಯಿಲ್ಲ. ನೆರೆ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದೆ. ಇದರಿಂದ ನಮ್ಮ ಜಿಲ್ಲೆಗೆ ಬರದಂತೆ ನಿಯಂತ್ರಿಸುವ ಸಲುವಾಗಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ತಹಶೀಲ್ದಾರ್ ನರಗುಂದ, ಡಿ.ಎಚ್.ಒ ಡಾ. ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *