ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ : AAP ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿ.

ಮುಡಾ ಹಗರಣ ವಿಚಾರ ಸಿಎಂ ವಿರುದ್ದ ರಾಜ್ಯಪಾಲರು ಪ್ರಸಿಕ್ಯೂಷನ್ ಹಿನ್ನಲೆಯಲ್ಲಿ ಇಂದು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ AAP ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿ. ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಚಂದ್ರು,  ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು.

ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ. ಅದೇ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ಮನವಿಯನ್ನು ಯಾಕೆ ಇನ್ನು ಪರಿಗಣಿಸಿಲ್ಲ…? ಕುಮಾರಸ್ವಾಮಿ ಅವರ ವಿರುದ್ದವು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೆ ಅವರು ಕೇಂದ್ರದ ಸಚಿವರು ಎಂದು ಅನುಮತಿ ಕೊಟ್ಟಿಲ್ಲ. ಇದರಿಂದ ಸ್ಪಷ್ಟವಾಗಿ ಗೊತಾಗುತ್ತೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೈಸೂರಿನ ಜಲದರ್ಶಿನಿಯಲ್ಲಿ AAP ಕಾರ್ಯಕರ್ತರ ಸಭೆ ನಡೆಸಿದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು  ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆ ಯಾವ ಸಂದರ್ಭದಲ್ಲಾದರೂ ಬರಬಹುದು. ಹೀಗಾಗಿ ಕಾರ್ಯಕರ್ತರನ್ನು ಸಂಘಟನೆ ಮಾಡುವ ಮೂಲಕ ಚುನಾವಣೆ ಎದುರಿಸಲು ಸಿದ್ದರಾಗಿದ್ದೇವೆ ಎಂದರು. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ . ಇಷ್ಟು ದಿನಗಳಾದರೂ ಸ್ಥಳೀಯ ಸಂಸ್ಥೆ ಚುನಾವಣೆಗಳು ಆಗದೇ ಇರುವುದು ಸಂವಿಧಾನ ಬಾಹಿರ. ಸಾರ್ವಜನಿಕ ಹಿತಾಸಕ್ತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು. ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ.