ಗುಂಡ್ಲುಪೇಟೆ: ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹೊನ್ನೆಗೌಡನಹಳ್ಳಿ ಗ್ರಾಮದ ರಾಜಪ್ಪ ಎಂಬುವರ ಜಮೀನಿನಲ್ಲಿ ದುರ್ಘಟನೆ ನಡೆದಿದ್ದು ಕೇರಳ ಮೂಲದ ಇಸ್ಮಾಯಿಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ಇಸ್ಮಾಯಿಲ್ ಬಾಳೆಕಾಯಿ ವ್ಯಾಪಾರಿಯ ಬಳಿ ರೈಟರ್ ಆಗಿ ಕೆಲಸ ಮಾಡುತ್ತಿದ್ದು ಕೈ ಕಾಲು ತೊಳೆಯಲು ಕೃಷಿ ಹೊಂಡಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದಾನೆ ಎನ್ನಲಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಮುದ್ದುರಾಜ್ ಭೇಟಿ ನೀಡಿ ಶವ ಹೊರ ತೆಗೆಸಿ ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.