ಮೈಸೂರು ಸೆಪ್ಟೆಂಬರ್ 7 : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.

ನಂತರ ಕೋವಿಡ್ ನಿಯಮಾವಳಿಯಂತೆ ನಡೆದ ಕಾರ್ಯಕ್ರಮದಲ್ಲಿ 244 ಪಿಎಚ್ಡಿ, 387 ಚಿನ್ನದ ಪದಕ ಪಡೆದವರಿಗೆ ರಾಜ್ಯಪಾಲರು, ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ವಿವಿಯ ಸಮಕುಲಾಧಿಪತಿಗಳಾದ ಶ್ರೀ ಸಿಎನ್ ಅಶ್ವಥ್ ನಾರಾಯಣ ಹಾಗೂ ವಿವಿ ಕುಲಪತಿಗಳಾದ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಪದವಿ ಪ್ರದಾನ ಮಾಡಿದರು.

ಪದ್ಮಭೂಷಣ ಡಾ.ಗೋಂವಿದರಾಜನ್ ಪದ್ಮನಾಭನ್ ಮತ್ತು ವಿಷನ್ ಗ್ರೂಪ್ ಆನ್ ಸ್ಟಾರ್ಟ್ ಅಪ್ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಿಎಸ್ ಐಆರ್ ಮಹಾ ನಿರ್ದೇಶಕ ಹಾಗೂ ಡಿಎಸ್ ಐಆರ್ ಕಾರ್ಯದರ್ಶಿ ಡಾ.ಶೇಕರ್ ಸಿ ಮಂಡೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು

ಬೆಳಿಗ್ಗೆ 11 ಗಂಟೆ ವೇಳೆಗೆ ಮೈಸೂರು ವಿವಿಯ ಕ್ರಾಫರ್ಡ್ ಭವನದಲ್ಲಿ ಕಾರ್ಯಕ್ರಮ ನಡೆಯಿತು. ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರು ಹಾಗೂ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಭಾರತೀಯ ವಿಜ್ಞಾನ ಸಂಸ್ಥೆಯ ಜೀವರಸಾಯನ ಶಾಸ್ತ್ರವಿಭಾಗದ ಗೌರವ ಪ್ರಾಧ್ಯಾಪಕ ಡಾ.ಡಾ.ಗೋವಿಂದರಾಜನ್ ಪದ್ಮನಾಭನ್ ಹಾಗೂ ಆಕ್ಸೆಲ್ ಇಂಡಿಯಾದ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ವಿಷನ್‌ಗ್ರೂಪ್ ಫಾರ್ ಸ್ಟಾರ್ಟ್ಸ್‌ಅಪ್‌ನ ಪ್ರಶಾಂತ್ ಪ್ರಕಾಶ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದರು.

ಎಸ್‌ಐಆರ್ ಮಹಾನಿರ್ದೇಶಕ ಪ್ರೊ.ಶೇಖರ್ ಸಿ.ಮಂಡೆ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಮೈವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಇನ್ನಿತರರು ಸಾಥ್ ನೀಡಿದರು.

ನಂತರ ಸಾಂಕೇತಿಕವಾಗಿ ವಿವಿಧ ವಿಭಾಗಗಳಲ್ಲಿ ಅತಿಹೆಚ್ಚು ಪದಕಗಳನ್ನು ಪಡೆದ 30 ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪದಕ ಪ್ರದಾನ ಮಾಡಲಾಯಿತು.
ನಂತರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ನಿಕಾಗಳಿಗೆ ಕ್ರಮವಾಗಿ ಪದವಿ ಪ್ರದಾನ ಮಾಡಲಾಯಿತು.
ಮೂರು ಹಂತಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.