ಇನ್ನೆರಡು ವರ್ಷ ಯಡಿಯೂರಪ್ಪರವರೇ ಸಿಎಂ!

ಚಾಮರಾಜನಗರ: ರಾಜ್ಯ ಸರ್ಕಾರದಲ್ಲಿ ನಾಯಕತ್ವದ ಯಾವುದೇ ಬದಲಾವಣೆ ಇಲ್ಲ,  ಅದು ಮುಗಿದ ಅಧ್ಯಾಯವಾಗಿದ್ದು, ಇನ್ನೆರಡು ವರ್ಷ ಯಡಿಯೂರಪ್ಪರವರೇ ರಾಜ್ಯದ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಚಾಮರಾಜನಗರದ ಸೇವಾ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಬಿಜೆಪಿ ಆಯೋಜಿಸಿದ್ದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ಮಾಡಿದ ತಂಡದವರಿಗೆ ಅಭಿನಂದಿಸುವ ಕಾರ್ಯಕ್ರಮಕ್ಕೆ ಭಾಗವಹಿಸುವ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೇಂದ್ರದ ಹೈ ಕಮಾಂಡ್ ಸ್ಪಷ್ಟ ನಿಲುವನ್ನು ಪ್ರಕಟಿಸಿದೆ, ಈ ಹಿನ್ನಲೆಯಲ್ಲಿ ನಾಯಕತ್ವದ ಬದಲಾವಣೆ ವಿಚಾರ ಈಗ ಅಪ್ರಸ್ತತವಾಗಿದೆ ಎಂದರು.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತರಾದ 36 ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸಾಂತ್ವನ ಹೇಳಲು ಯಾರೂ ಬರಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಸ್ತುತ ಕೋವಿಡ್ ಸೋಂಕು ಹರಡುವ ಹಿನ್ನಲೆಯಲ್ಲಿ ಸಾಂತ್ವನ ಹೇಳಲು ಆಗಲಿಲ್ಲ ಎಂದು ಸಮಜಾಯಿಷಿ ನೀಡಿದರು.

ಬಳಿಕ ಚಾಮರಾಜನಗರ ಸೇವಾ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್ ಸೋಂಕಿತ ಮೃತಪಟ್ಟವರ ಶವಗಳನ್ನು ಅಂತ್ಯ ಸಂಸ್ಕಾರ ಮಾಡಿದ ಸ್ವಯಂ ಸೇವಕರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಬಿಜೆಪಿಯ ಗುಂಡ್ಲುಪೇಟೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್, ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಬಿಜೆಪಿ ಮುಖಂಡರು ಮತ್ತು ಸ್ವಯಂ ಸೇವಕರು ಇದ್ದರು.

Leave a Reply

Your email address will not be published. Required fields are marked *