ಮೈಸೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಮೈಸೂರು ವಾಸಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯರೊಂದಿಗೆ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಐದಾರು ಮಂದಿ ಯುವಕರಿದ್ದ ತಂಡ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.
ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆ ಯುವಕರು ಯಾರು, ವಿದ್ಯಾರ್ಥಿನಿಯ ಗೆಳೆಯನ ಸ್ನೇಹಿತರಾ? ಅಥವಾ ಹೊರಗಿನಿಂದ ಬಂದವರಾ? ಏತಕ್ಕಾಗಿ ಲಲಿತಾದ್ರಿಪುರ ಬೆಟ್ಟಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಬೇಕಿದೆ.
ಈ ಬಗ್ಗೆ ಆಲನಹಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರದ ಜನತೆಯ ನಿದ್ದೆಗಡಿಸಿದೆ.
ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಜನತೆಯಲ್ಲಿ ಆತಂಕ ಉಂಟು ಮಾಡಿದೆ.
ಹಾಡಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಮೈಸೂರಲ್ಲಿ ನೆಡೆದಿದೆ.