ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿರುವ ಭಾರತದ ಸುಮಿತ್ ಅಂತಿಲ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಮ್ಮ ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್‌ನಲ್ಲಿ ಮಿಂಚುತ್ತಲೇ ಇದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಸುಮಿತ್ ಅಂತಿಲ್ ಅವರು ನಿರ್ಮಿಸಿದ ದಾಖಲೆಗೆ ರಾಷ್ಟ್ರವೇ ಹೆಮ್ಮೆಪಡುತ್ತಿದೆ’ ಎಂದು ತಿಳಿಸಿದ್ದಾರೆ. ‘ಪ್ರತಿಷ್ಠಿತ ಚಿನ್ನದ ಪದಕ ಗೆದ್ದ ಸುಮಿತ್ ಅವರಿಗೆ ಅಭಿನಂದನೆಗಳು’ ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ. ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಸುಮಿತ್ ಅಂತಿಲ್ ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದು ಕೊಂಡಿದ್ದಾರೆ