ಚಿನ್ನದ ಗುಡಿ ಹುಂಡಿ ಗ್ರಾಮದಲ್ಲಿ ರಾಜ್ಯಪಾಲರ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಚಿನ್ನದ ಗುಡಿ ಹುಂಡಿ ಗ್ರಾಮದ ರೈಲ್ವೆ ಗೇಟ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮುಖಂಡರೆಲ್ಲ ಸೇರಿ ಚಿನ್ನದಗುಡಿ ಹುಂಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪ್ರತಿಭಟನಾಕಾರರು ಆಕ್ರೋಶಗೊಂಡು ರಾಜ್ಯಪಾಲರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಗೋ ಬ್ಯಾಕ್ ರಾಜ್ಯಪಾಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕುರುಬರ ಸಂಘದ ನಿರ್ದೇಶಕರಾದ ರಾಜು ಕುರಿಹುಂಡಿಯವರು ಮಾತನಾಡಿ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ಅವರ ಕೈಗೊಂಬೆಯಾಗಿ ಕುಣಿಯುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸುತ್ತೇವೆ, ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತನಿಖೆಗೆ ಆದೇಶ ಮಾಡಿರುವುದನ್ನು ಹಿಂಪಡೆಯದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಪ್ರತಿಭಟನೆಯಲ್ಲಿ ಚಿನ್ನದ ಗುಡಿ ಹುಂಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುಬ್ರಮಣ್ಯ ಮತ್ತು ಕಾಂಗ್ರೆಸ್ನ ಮುಖಂಡರಾದ ಪ್ರಭು, ಶಿವು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.