ಮೈಸೂರು, ಸೆಪ್ಟೆಂಬರ್ 06 :- ಎನ್.ಆರ್.ಮೋಹಲ್ಲಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಉನ್ನತಿಕರಿಸಿರುವ ಐಟಿಐ ಕಾಲೇಜಿನ ಕಾಮಗಾರಿಯನ್ನು

ಸೋಮವಾರ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ & ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಎ.ಹೇಮಂತ್ ಕುಮಾರ್ ಗೌಡ ಹಾಗೂ ಕಾಲೇಜಿನ ಸಿಬ್ಬಂದಿಗಳು ಸೇರಿದಂತೆ ಇತರರು ಹಾಜರಿದ್ದರು.