ರುಕ್ಮಿಣಿ ಮಾದೇಗೌಡ ಅವರ ಪಾಲಿಕೆ ಸದಸ್ಯತ್ವ ಅಸಿಂಧು ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 36 ರ ಉಪಚುನಾವಣೆ ನಡೆಸಲು ಪಾಲಿಕೆ ಮುಂದಾಗಿದೆ. ಹೀಗಾಗಿ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಸೆಪ್ಟಂಬರ್ 3 ರಂದು ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಚುನಾವಣಾ ಸಂದರ್ಭದಲ್ಲಿ ರುಕ್ಮಿಣಿ ಮಾದೇಗೌಡ ಅವರು ಸಲ್ಲಿಸಿದ್ದ ಅಫಿಡೆವಿಟ್ ಸುಳ್ಳು ಎಂದು ಆರೋಪಿಸಿ ಪ್ರತಿಸ್ಪರ್ಧಿ ರಜಿನಿ ಅಣ್ಣಯ್ಯ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಹಿನ್ನೆಲೆಯಲ್ಲಿ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ರದ್ದು ಮಾಡಿ ಆದೇಶ ನೀಡಿತ್ತು. ಇದೀಗ ಸದಸ್ಯತ್ವ ಕಸಿದುಕೊಂಡ ಕಾರಣ ರುಕ್ಮಿಣಿ ಮಾದೇಗೌಡ ಅವರು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯ ಬೇಕಾಯಿತು.
ಹೀಗಾಗಿ ತೆರವಾಗಿದ್ದ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಸೆಪ್ಟೆಂಬರ್ 3ರಂದು ಮೇಯರ್ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.