ವೇತನ ಬಾರದ ಹಿನ್ನಲೆ ಆತ್ಮಹತ್ಯೆಮಾಡಿಕೊಂಡಿದ್ದಾರೆಂದು ಆರೋಪ
ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ನಲ್ಲಿ ಪೌರಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ.
ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಘಟನೆ.
ರಂಗ (40) ಮೃತ ದುರ್ದೈವಿ.
ಕಳೆದ ಇಪ್ಪತ್ತು ವರ್ಷಗಳಿಂದ ಕಳಲೆ ಗ್ರಾಮ ಪಂಚಾಯ್ತಿಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು.
ಗ್ರಾಮ ಪಂಚಾಯಿತಿ ಕಚೇರಿಯ ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ಕೆಲವು ತಿಂಗಳಿಂದ ವೇತನ ಬಾರದ ಹಿನ್ನಲೆ ಬೇಸತ್ತ ರಂಗ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಆರೋಪಿಸಲಾಗಿದೆ.
ಬೆಳಿಗ್ಗೆ ಪೌರಕಾರ್ಮಿಕರು ಮತ್ತು ಗ್ರಾಪಂ ಅಧ್ಯಕ್ಷೆ ರಾಜಮ್ಮ ನಡುವೆ ವೇತನ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು.
ಕಳಲೆ ಗ್ರಾ.ಪಂ. ಅಧಿಕಾರಿಗಳು ಊಟಕ್ಕೆ ತೆರಳಿದ ಸಂದರ್ಭದಲ್ಲಿ ರಂಗ ನೇಣಿಗೆ ಶರಣಾಗಿದ್ದಾರೆ.
ಸ್ಥಳಕ್ಕೆ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.