ಚಾಮರಾಜಮಗರ : ಕೊರೊನಾ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಪ್ರವರ್ಗ 1ರಡಿ ಘೋಷಣೆಯಾಗಿ ಲಾಕ್ಡೌನ್ ತೆರವುಗೊಂಡ ಪರಿಣಾಮ ಕಳೆದ ಎರಡು ತಿಂಗಳಿಂದ ಬಂದ್ ಆಗಿದ್ದ ಬಂಡೀಪುರ ಸಫಾರಿ ನಾಳೆಯಿಂದ ಪುನಾರಂಭವಾಗುತ್ತಿದೆ. ಇದರಿಂದ ವನ್ಯಜೀವಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ನಾಳೆಯಿಂದ ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಪ್ರವಾಸೋದ್ಯಮ ಚಟುವಟಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಸಫಾರಿಯೂ ಆರಂಭವಾಗಲಿದೆ. ನಾಳೆಯಿಂದ ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರಿಗೆ ಸ್ಥಳದಲ್ಲೇ ಟಿಕೆಟ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಜುಲೈ 5ರಿಂದ ಆನ್ಲೈನ್ ಬುಕ್ಕಿ ಸೌಲಭ್ಯ ದೊರೆಯಲಿದೆ. ಕೋವಿಡ್ ನಿಯಮ ಅನುಸರಿಸಿ ಸಫಾರಿ ಆರಂಬಿಸಲಾಗುತ್ತಿದೆ. ಬಂಡೀಪುರಕ್ಕೆ ಆಗಮಿಸುವ ವನ್ಯಜೀವಿ ಪ್ರಿಯರು ಸಹ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು ಬಹುಮುಖ್ಯವಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಮಾಹಿತಿ ನೀಡಿದರು.

ಕಳೆದ ಎರಡು ತಿಂಗಳಿಂದ ಕೊರೊನಾ ಸೋಂಕು ಹೆಚ್ಚಳವಾಗಿದ್ದ ಪರಿಣಾಮ ಎಲ್ಲ ರೀತಿಯ ಚಟುವಟಿಕೆಗಳು ಬಂದ್ ಆಗಿದ್ದವು. ದಿನದಿಂದ ದಿನಕ್ಕೆ ಕೊರೊನ ಸೋಂಕು ಚಾಮರಾಜನಗರ ಜಿಲ್ಲೆಯಲ್ಲಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರವಾಸೋದ್ಯಮ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.