ಜ.19ರಂದು ತಮಿಳುನಾಡು ಗಡಿ ಬಂದ್‌?

ಬೆಂಗಳೂರು: ಜ.19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಆನೇಕಲ್ ಗಡಿಯಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ. ಜ.22ರಂದು ಟೌನ್‌ಹಾಲ್‌ನಿಂದ ಬೃಹತ್ ಮೆರವಣಿಗೆ. ಕಳಸಾ ಬಂಡೂರಿ ಯೋಜನೆ ಜಾರಿಗೂ ಆಗ್ರಹಿಸಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಇದೇ ವೇಳೆ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡದಂತೆ ಸ್ಟಾಲಿನ್‌ ಅವರಿಗೆ ಎಚ್ಚರಿಕೆ ನೀಡಿದ್ದಾರೆ.