ಮೈಸೂರು 29 :-ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ಜೀವದ ಹಂಗು ತೊರೆದು ಪತ್ರಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ರೀತಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಸಂಘ ಸಂಸ್ಥೆಗಳು ಹತ್ತು ಹಲವು ರೀತಿಯಲ್ಲಿ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿವೆ.
ಇದರ ಮುಂದುವರಿದ ಭಾಗವಾಗಿ ಸಾಫನ್ ಇನ್ಫೋಸಿಸ್ ಲಿಮಿಟೆಡ್ ವತಿಯಿಂದ 250 ಥರ್ಮಮೀಟರ್ ಗಳನ್ನು ಮಂಗಳವಾರ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಕೊಡ ಮಾಡಲಾಯಿತು. ಜಿಲ್ಲಾ ಪತ್ರಕರ್ತರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಫನ್ ಇನ್ಫೋಸಿಸ್ ಲಿಮಿಟೆಡ್ ನ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಉಡುಪ, ಭದ್ರತಾ ವಿಭಾಗದ ಮುಖ್ಯಸ್ಥರಾದ ಅನಂತರಾಜು, ಪೂವಯ್ಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್ ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ಸುಬ್ರಹ್ಮಣ್ಯ, ನಗರ ಉಪಾಧ್ಯಕ್ಷ ಎಂ ಎಸ್ ಬಸವಣ್ಣ, ನಗರ ಕಾರ್ಯದರ್ಶಿ ಪಿ ರಂಗಸ್ವಾಮಿ ಹಾಜರಿದ್ದರು.

