ಮೈಸೂರು, ಜೂನ್. 28:- ಎಲ್ಲಾ 18 ವರ್ಷ ಮೇಲ್ಪಟ್ಟ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅವರ ಕಾಲೇಜುಗಳಲ್ಲೇ ಜೂನ್ 29 ರಿಂದ ಲಸಿಕೆಯನ್ನು ನೀಡಲು ಸಿದ್ದಪಡಿಸಿಕೊಳ್ಳಲಾಗಿದೆ. ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೂ ಈ ವಿಷಯ ತಿಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಹೆಚ್. ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲೆಯಲ್ಲಿ ಇದುವರೆಗೂ 18 ವರ್ಷ ಮೇಲ್ಪಟ್ಟ ವಿಶೇಷ ಗುಂಪಿನ 1.80 ಲಕ್ಷ ಫಲಾನುಭವಿಗಳಿಗೆ ಲಸಿಕೆಯನ್ನು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ,ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ನೀಡಲಾಗಿದೆ.
ಸಮುದಾಯದಲ್ಲಿ ಇರುವ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಲಸಿಕೆ ದಾಸ್ತಾನು ರಾಜ್ಯ ಮಟ್ಟದಲ್ಲೇ ಮುಗಿದಿರುವುದರಿಂದ ಜಿಲ್ಲೆಯಲ್ಲಿ ಲಸಿಕೆ ಅಭಿಯಾನವನ್ನು ಸ್ಥಗಿತಗೊಳಿಸಲಾಗಿದೆ. ಲಸಿಕೆ ಲಭ್ಯವಾದ್ದಾಗ ಮಾಧ್ಯಮಗಳ ಮೂಲಕ ಪ್ರಕಟಿಸಲಾಗುವುದು. ಆದ್ದರಿಂದ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.