ನಾಳೆಯಿಂದ ಪ್ರವಾಸಿಗರಿಗೆ ಮೈಸೂರು ಅರಮನೆ ಪ್ರವೇಶಕ್ಕೆ ಅವಕಾಶ

.
ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಭಂಧಿಸಲಾಗಿತ್ತು.
ಮೈಸೂರು ಅರಮನೆಯ ವೀಕ್ಷಣೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ.
ಅರಮನೆಯ ವೆಬ್‌ಸೈಟ್ www.mysorepalace.gov.in ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶ.
ಅರಮನೆಯ ವರಾಹ ದ್ವಾರಗಳಲ್ಲಿರುವ ಟಿಕೆಟ್‌ ಕೌಂಟರ್‌ನಲ್ಲಿಯೂ ಸಹ ಟಿಕೆಟ್‌.
ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ. ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ.
ಟಿಕೆಟ್‌ ಕೌಂಟರ್‌ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಗುರುತು.
ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
ಮಾಸ್ಕ್ ತಪ್ಪದೇ ಧರಿಸಬೇಕು. ಪ್ರವಾಸಿಗರ ಮೇಲೆ ಸಿಸಿಟಿವಿ ಕಾವಲು.
ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ.
ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಮಾಹಿತಿ.

Leave a Reply

Your email address will not be published. Required fields are marked *