ಮೈಸೂರು,ಆ.20:- ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಯಿoದ 10:30 ಗಂಟೆಯವರೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗೆ ಸುಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದು, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.